ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೆಜ್ ಮತ್ತಿತರರು ಉಪಸ್ಥಿತರಿದ್ದರು.