ಕೊಡವ ಸಮಾಜ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಇವರಿಗೆ ಸರಿಸಮಾನವಾದವರು ಬೇರೆ ಇಲ್ಲ. ಸಂಸ್ಕೃತಿ, ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯಕ್ಕೆ, ದೇಶ ರಕ್ಷಣೆಗೆ, ಕ್ರೀಡೆಗೆ, ರಾಜಕಾರಣಕ್ಕೆ ಕೊಡವರ ಕೊಡುಗೆ ಅಪಾರ ಎಂದು ಸಿ.ಎಂ.ಸಿದ್ಧರಾಮಯ್ಯ ಹೇಳಿದರು.  ಇದನ್ನೂ ಓದಿ : ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು
ಅವರು ಜೂ.15 ರಂದು ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಎ.ಕೆ.ಸುಬ್ಬಯ್ಯ ಮತ್ತು ಎಂ.ಸಿ.ನಾಣಯ್ಯ ಉತ್ತಮ ಸಂಸದೀಯ ಪಟುಗಳು. ಇವರು ಸದನದಲ್ಲಿ ಸಮಾಜಮುಖಿಯಾಗಿ ಮಾತನಾಡಿದ ಫೈರ್ ಬ್ರಾಂಡ್ ಗಳು. ಪೊನ್ನಣ್ಣ ಅವರೂ ಫೈರ್ ಬ್ರಾಂಡ್ ಆಗುವ ಎಲ್ಲಾ ಲಕ್ಷಣಗಳೂ ಇವೆ.
ಪೊನ್ನಣ್ಣ ಅವರಿಗೆ ರಾಜಕೀಯದಲ್ಲಿ ಉತ್ತಮ‌ ಭವಿಷ್ಯವಿದೆ. ಕೊಡವ ಸಮಾಜದ ಆಸ್ತಿ ಆಗಿರುವ ಇವರನ್ನು ನೀವೆಲ್ಲ ಬೆಂಬಲಿಸಿದರೆ ರಾಜ್ಯದ ಆಸ್ತಿ ಆಗುತ್ತಾರೆ ಎಂದರು.
ಯಾವುದೇ ಸಮುದಾಯಗಳು ಜಾಗ ಕೇಳಿದರೂ ಗೈಡೆನ್ಸ್ ಬೆಲೆಯಲ್ಲಿ ಶೇ10 ರಷ್ಟು ಬೆಲೆಗೆ ಕೊಡಬೇಕು ಎಂದು ಕಂದಾಯ ಸಚಿವರಿಗೆ ಸೂಚಿಸಿದ್ದೇನೆ. ಅದರಂತೆ ಕೊಡವ ಸಮಾಜಕ್ಕೂ ನೀಡಿದ್ದೇವೆ. ನಾವೆಲ್ಲರೂ ಭಾರತೀಯರು ಮತ್ತು ಕನ್ನಡಿಗರು. ದೇಶ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಕೊಡವರು ಜಾತಿ-ಧರ್ಮ ಮಾಡುವವರಲ್ಲ. ಎಲ್ಲರನ್ನೂ ಭಾರತೀಯರು ಎಂದು ಗೌರವಿಸುವವರು.
ನಮ್ಮ ಪಕ್ಷದ ಸಂಸ್ಕೃತಿ ಕೂಡ ಸರ್ವರನ್ನೂ ಸಮಾನವಾಗಿ ಕಾಣುವುದಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಭಾರತೀಯರು, ಭಾರತೀಯ ಪ್ರಜೆಗಳು ಎಂದು ಪರಿಗಣಿಸುತ್ತೇವೆ. ಜಾತಿ, ಧರ್ಮ‌ಗಳು ಮನೆಯೊಳಗಿನ
ಆಚರಣೆಯಾಗಿರಬೇಕು. ಮನೆಯಿಂದ ಹೊರಗೆ ಬಂದ ಕೂಡಲೇ ನಾವೆಲ್ಲರೂ ಒಂದೇ, ನಾವು ಭಾರತೀಯರಾಗಿರಬೇಕು. ಇದನ್ನೂ ಓದಿ : ಉತ್ತರಾಖಂಡ್‌ ಹೆಲಿಕಾಪ್ಟರ್‌ ಪತನ – 15 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್‌ಗಿತ್ತು ಅಪಾರ ಅನುಭವ
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವ ಸಂಬಂಧ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.