ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸಮಾಜವಾದಿ ಅಧ್ಯಯನ‌ ಕೇಂದ್ರ ಮತ್ತು ಸಮಾಜವಾದಿ ಸಮಾಗಮ‌ ಸಂಸ್ಥೆ ಆಯೋಜಿಸಿದ್ದ “ದಕ್ಷಿಣ ಭಾರತ ಸಮಾಜವಾದಿಗಳ‌ ಸಮ್ಮೇಳನ”ವನ್ನು  ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು ಬಳಿಕ ಸಮಾಜವಾದಿ ಚಿಂತನೆ ಸಾಗಿಬಂದ ಹಾದಿಯನ್ನು ಸ್ಮರಿಸಿದರು.
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಸುದರ್ಶನ‌ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ  ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಹಿರಿಯ ಸಮಾಜವಾದಿ ಚಿಂತಕ ಹಾಗೂ ಮಾಜಿ ಹಣಕಾಸು ಸಚಿವರಾದ ಕೇರಳ ರಾಜ್ಯದ ಐಸಾಕ್ ಥಾಮಸ್, ತೆಲಂಗಾಣ ಶಾಸಕರಾದ ವಂಶಿಕೃಷ್ಣ, ಮಾಜಿ ಸಂಸದರಾದ ಥಂಪನ್ ಥಾಮಸ್, ಕಾರ್ಮಿಕ ಮುಖಂಡರಾದ ಗೀತಾ ರಾಮಕೃಷ್ಣನ್, ಮಾಜಿ ಸಂಸದರಾದ ಎಲ್.ಹನುಮಂತಯ್ಯ, ಸಮಾಜವಾದಿ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಸುಂದರ್ ಅವರುಗಳು ಉಪಸ್ಥಿತರಿದ್ದರು.