ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ಗ್ರಾಮೀಣ ಭಾಗದ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಖಗೋಳ ಶಾಸ್ತ್ರದ ಅರಿವು ಹಾಗೂ ಆಸಕ್ತಿ ಮೂಡಿಸುವ “ಸಂಚಾರಿ ಡಿಜಿಟಲ್ ತಾರಾಲಯ ಯೋಜನೆ”ಗೆ ಸಿ.ಎಂ. ಸಿದ್ದರಾಮಯ್ಯ ಚಾಲನೆ ನೀಡಿ, ಈ ಯೋಜನೆಯು ಗರಿಷ್ಠ ಮಕ್ಕಳನ್ನು ತಲುಪಲಿ ಎಂದು ಶುಭ ಹಾರೈಸಿದರು.  ಇದನ್ನೂ ಓದಿ :ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಸನ್ಮಾನ.
ಸಮಾರಂಭದಲ್ಲಿ ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.