ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಿ.ಎಂ.ಸಿದ್ಧರಾಮಯ್ಯ ಅವರು ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದರು.
ಆಂಧ್ರಪ್ರದೇಶದ ಅರಣ್ಯ ಸಚಿವರಾದ ಪವನ್ ಕಲ್ಯಾಣ್ ಅವರು ಆಂಧ್ರ ಸರ್ಕಾರದ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕಾರ್ಯಕ್ರಮದ ಅಧ್ಯಕ್ಷರು, ಶಾಸಕರು ಆದ ರಿಜ್ವಾನ್ ಅರ್ಷದ್, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಸಚಿವರುಗಳಾದ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.