ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದೆ.
ಈ ವೇಳೆ ರಾಜ್ಯದ ಹೆಮ್ಮೆಯ ಗುರುತಾದ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದೆ.

ದೆಹಲಿಯಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದೆ.

ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಸೇರಿ ಹಲವರು ಈ ವೇಳೆ ನನ್ನೊಂದಿಗಿದ್ದರು.

ದೆಹಲಿಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್‌ ಅವರನ್ನು ಭೇಟಿಯಾಗಿ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು 16ನೇ ಹಣಕಾಸು ಆಯೋಗದಲ್ಲಿ ಸರಿದೂಗಿಸುವುದು, ರಾಜ್ಯದ ನ್ಯಾಯಯುತ ಪಾಲನ್ನು ಒದಗಿಸುವುದು ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿ, ರಾಜ್ಯದ ಪರವಾಗಿ ಮನವಿ ಸಲ್ಲಿಸಿದೆ. ಇದನ್ನೂ ಓದಿ : ಉಸಿರು, ಮನಸ್ಸು ಹಾಗೂ ಶರೀರ ಈ ಮೂರನ್ನುಜೋಡಿಸಲು ಯೋಗದಿಂದ ಮಾತ್ರ ಸಾದ್ಯ

ಇದನ್ನೂ ಓದಿ : ನೂತನವಾಗಿ ನಿರ್ಮಿಸಿರುವ ಅಗ್ನಿಶಾಮಕ ಠಾಣೆಯ ಕಟ್ಟಡ ಉದ್ಘಾಟನೆ