ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರ ಜೊತೆಯಾಗಿ ಮಾನ್ಯ ಮುಖ್ಯಮಂತ್ತಿಗಳಾದ ಸಿದ್ಧರಾಮಯ್ಯ ಅವರು ಪಾಲ್ಗೊಂಡು, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರ ಕ್ರೀಡಾ ಪ್ರದರ್ಶನವನ್ನು ವೀಕ್ಷಿಸಿದರು.
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ. 1 ಜಾವಲಿನ್ ಪಟು ನೀರಜ್ ಚೋಪ್ರ ತಮ್ಮ ಹೆಸರಿನಲ್ಲಿ ಆಯೋಜಿಸಿದ್ದ ಈ ಅಂತಾರಾಷ್ಟ್ರೀಯ ಜಾವಲಿನ್ ಪಂದ್ಯಾಕೂಟದಲ್ಲಿ ಸ್ವತಃ ಅವರೇ ಚಾಂಪಿಯನ್ ಆಗಿ ಹೊರಹೊಮ್ಮಿದ ಕ್ಷಣಗಳಿಗೆ ನಾನು ಸಾಕ್ಷಿಯಾದದ್ದು ಹೆಚ್ಚು ಖುಷಿ ಕೊಟ್ಟಿತು. ನೀರಜ್ ಚೋಪ್ರ ಅವರಿಗೆ ಪದಕ ನೀಡಿ ಗೌರವಿಸಿ, ಮುಂದಿನ ಒಲಿಂಪಿಕ್‌ನಲ್ಲಿ ಮತ್ತೆ ಭಾರತದ ಕೀರ್ತಿಪತಾಕೆ ಹಾರಲೆಂದು ಶುಭ ಹಾರೈಸಿದೆ.
ಗೃಹ ಸಚಿವ ಜಿ.ಪರಮೇಶ್ವರ್, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಆದ ಕೆ.ಗೋವಿಂದರಾಜು, ಶಾಸಕರಾದ ರಿಜ್ವಾನ್ ಅರ್ಷದ್ ಅವರು ಉಪಸ್ಥಿತರಿದ್ದರು.