ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಅಂಗವಾಗಿ ಇಬ್ಬರು ರಾಷ್ಟ್ರನಿರ್ಮಾತೃಗಳ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಸಿ.ಎಂ.ಸಿದ್ಧರಾಮಯ್ಯ ಅವರು ಗೌರವ ನಮನ ಸಲ್ಲಿಸಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರುಗಳು, ಪದಾಧಿಕಾರಿಗಳು, ಸಚಿವರು, ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.