ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ  ಆಗಸ್ಟ್ 15ರಿಂದ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌  ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ  ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ  ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು. ಇದನ್ನೂ ಓದಿ :ಭಾರತದ ಬಳಿಯಿರುವಂತೆ ಅತ್ಯಾಧುನಿಕ ವಾಯುರಕ್ಷಣಾ ವ್ಯವಸ್ಥೆ ನಮಗೂ ಕೊಡಿ – ಅಮೆರಿಕಕ್ಕೆ ಪಾಕ್‌ ಬೇಡಿಕೆ

ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಮಾಹಿತಿಯನ್ನು 3 ತಿಂಗಳ ಒಳಗೆ ಕೊಡಬೇಕು. 3 ತಿಂಗಳ ಒಳಗೆ ಬಾಕಿ ಇರುವ 20 ಸಾವಿರ ಎಕರೆ ದೇವಾಲಯ ಜಮೀನು ಇಂಡೀಕರಣ ಆಗಬೇಕು.

ಗ್ರಾಮಾಂತರ ಮತ್ತು ನಗರ ಭಾಗದಲ್ಲಿ ಇರುವ ಮುಜರಾಯಿ ದೇವಾಲಯಗಳ ಆಸ್ತಿಗಳನ್ನ ಪ್ರತ್ಯೇಕ ಸರ್ವೆ ಮಾಡಬೇಕು. ದೇವಸ್ಥಾನ ಹೆಸರಿನಲ್ಲಿ ಖಾತೆ, ಆಸ್ತಿ ಪತ್ರ ದಾಖಲೆಗಳು ಸರಿಯಾಗಿ ಇರದಿದ್ದರೆ ಎಲ್ಲಾ ದೇವಾಲಯದ ಜಾಗ 3 ತಿಂಗಳ ಒಳಗಡೆ ಸರ್ವೆ ಮಾಡಿ ನೋಟಿಫಿಕೇಶನ್ ಮಾಡಲು ಸೂಚನೆ. ಅರ್ಚಕರಿಗೆ ತಸ್ತೀಕ್ ನೇರ ವರ್ಗಾವಣೆ  ಮೂಲಕ ನೀಡಲು ಕ್ರಮ. ಈಗ 25 ಸಾವಿರ ಅರ್ಚಕರ ಪೈಕಿ 14 ಸಾವಿರ ಅರ್ಚಕರು ಮಾಹಿತಿ ಕೊಟ್ಟಿದ್ದಾರೆ. ಉಳಿದವರು ಬೇಗ ಮಾಹಿತಿ ಕೊಟ್ಟರೆ ಅವರಿಗೂ DBT ಮೂಲಕ ತಸ್ತೀಕ್ ನೀಡಲು ಕ್ರಮ. ಇದನ್ನೂ ಓದಿ : World Oceans Day ಜೂ. 8 ವಿಶ್ವ ಸಾಗರ ದಿನ

31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು ಉಳಿದ ಕಡೆ ಶೀಘ್ರವೇ ಮಾಡಬೇಕು. ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ ಭವನಗಳಲ್ಲಿ 3 ಸ್ಟಾರ್ ಸೌಲಭ್ಯ ಗಳನ್ನು ನೀಡಲು ನಿರ್ಧಾರ. ತಿರುಪತಿ, ತುಳಿಜಾಪುರ, ಪಂಡರಾಪುರ, ಸೇರಿ ಹಲವು ಕಡೆ ಭವನಗಳನ್ನು ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು.

ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗ್‌ ಅನ್ನು ಆನ್‌ಲೈನ್‌ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ಸೂಚನೆ. ಹೊಸ ಪ್ರಾಧಿಕಾರಗಳ ಸಮಗ್ರ ಯೋಜನೆಗೆ ಕ್ರಮವಹಿಸಲಾಗಿದೆ. ಹುಲಿಗೆಮ್ಮ, ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ, ರೇಣುಕಾ ಎಲ್ಲಮ್ಮ, ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲ್ಯಾನ್ ಮಾಡಲು ನಿರ್ಧಾರ. ಚಾಮುಂಡೇಶ್ವರಿ ಬೆಟ್ಟದಲ್ಲಿ ಒತ್ತುವರಿ ಆಗಿದ್ದ 11 ಎಕರೆ ಜಾಗವನ್ನು ತೆರವು ಮಾಡಲಾಗಿದೆ. ಉಳಿದ ಜಾಗ ತೆರವುಗೊಳಿಸಲು ಸೂಚನೆ.