ವಿಧಾನಸೌಧದ ಮುಂಭಾಗ ಆಯೋಜಿಸಿದ್ದ 11ನೇ ಕಾಮನ್‌ ವೆಲ್ತ್‌ ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು  ಪಾಲ್ಗೊಂಡರು ಬಳಿಕ ಮಾತನಾಡಿ ಇಡೀ ದೇಶ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಡಿ ಮುನ್ನಡೆಯುವಂತೆ ಕರೆ ನೀಡಿದರು. ಇದನ್ನೂ ಓದಿ :  ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಚಾಲಕ ಪಾರು

11ನೇ ಕಾಮನ್‌ ವೆಲ್ತ್‌ ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನ

ಕಾರ್ಯಕ್ರಮದಲ್ಲಿ ಲೋಕಸಭೆಯ ಸ್ಪೀಕರ್ ಓಂಬಿರ್ಲಾ, ರಾಜ್ಯಸಭೆಯ ಉಪಾಧ್ಯಕ್ಷರಾದ ಹರಿವಂಶ್ ನಾರಾಯಣ ಸಿಂಗ್, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಅನೇಕ ಗಣ್ಯರು ಉಪಸ್ಥಿತರಿದ್ದರು.