ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಧಾನಮಂಡಲ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರದ ಸಾಧನೆಯನ್ನು ಸಮರ್ಥವಾಗಿ ಮಂಡಿಸುವಂತೆ ಮತ್ತು ವಿರೋಧ ಪಕ್ಷಗಳ ಆಧಾರ ರಹಿತ ಆರೋಪಗಳು ಹಾಗೂ ಸುಳ್ಳುಗಳನ್ನು ದಾಖಲೆ ಹಾಗೂ ಅಂಕಿ ಅಂಶಗಳ ಸಮೇತ ಸಮರ್ಥವಾಗಿ ಪ್ರಸ್ತಾಪಿಸಿ ಉತ್ತರ ನೀಡುವಂತೆ ಮುಖ್ಯಮಂತ್ರಿಗಳು ಸಭೆಯಲ್ಲಿ ವಿವರಿಸಿದರು. ಇದನ್ನೂ ಓದಿ : ಪವರ್‌ಮ್ಯಾನ್‌ಗಳೊಂದಿಗೆ ರಕ್ಷಾಬಂಧನ ಆಚರಣೆ
ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಸಚಿವರಾದ ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎನ್.ಎಸ್.ಬೋಸರಾಜು ಸೇರಿದಂತೆ ಎಲ್ಲ ಸಚಿವರುಗಳು ಹಾಗೂ ಶಾಸಕರುಗಳು ಉಪಸ್ಥಿತರಿದ್ದರು.