ಕರ್ನಾಟಕಕ್ಕೆ ಪ್ರದಾನ ಮಂತ್ರಿ  ನರೇಂದ್ರ ಮೋದಿ ಅವರ ಸರ್ಕಾರದ ವಿಶೇಷ ಕೊಡುಗೆಯಲ್ಲಿ ಮಾನ್ಯ ಮಾಜಿ ಮುಖ್ಯ ಮಂತ್ರಿ ಬಿ.ವೈ. ಯಡಿಯೂರಪ್ಪ    ಹಾಗೂ ಬಿ.ವೈ ರಾಘವೇಂದ್ರ ಅವರ ನಿರಂತರ ಪರಿಶ್ರಮದ ಯೋಜನೆ ಮಲೆನಾಡಿಗರ ಶತಮಾನಗಳ ಕನಸು ವಿಶ್ವದರ್ಜೆಯ 600 ಕೋಟಿ ವೆಚ್ಚದ ಸಿಗಂದೂರು ಕೇಬಲ್ ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಇಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಇದನ್ನೂ ಓದಿ :   ಭಾರತೀಯ ಯುವ ಶಟ್ಲರ್ ಆಯುಷ್ ಶೆಟ್ಟಿ ಅವರನ್ನು ಅಭಿನಂದಿಸಿದ – ಸಿ.ಎಂ.

ಶರಾವತಿ ಹಿನ್ನೀರಿಗೆ ಸುಮಾರು 423.15 ಕೋಟಿ ವೆಚ್ಚದಲ್ಲಿ ಅಂಬಾರಗೋಡ್ಲು ಯಿಂದ ಕಳಸವಳ್ಳಿ ನಡುವೆ ನಿರ್ಮಾಣವಾಗಿರುವ 2.25ಕಿ.ಮೀ ಉದ್ದದ ಕೇಬಲ್ ಆಧಾರಿತ ಸಿಗಂದೂರು ಸೇತುವೆಯು ಮಲೆನಾಡಿಗರ ಶತಮಾನಗಳ ಕನಸು ನನಸು ಮಾಡುವ ಮೂಲಕ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲು ನಿರ್ಮಿಸುತ್ತಿದೆ.

ಇತಿಹಾಸ ಪ್ರಸಿದ್ಧ ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಅಸಂಖ್ಯಾತ ಭಕ್ತರ ದರ್ಶನಕ್ಕೆ ಅನುಕೂಲವಾಗಲಿದ್ದು, ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಬೆಳವಣಿಗೆಯ ಜತೆಗೆ ತುರ್ತು ಸಂದರ್ಭಗಳಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಅನುಭವಿಸುತ್ತಿದ್ದ ಅನಾನುಕೂಲತೆ ದೂರಾಗಲಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ, ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಕೆ.ಜಗದೀಶ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ, ಮುಖಂಡರಾದ ಶ್ರೀ ಮೇಘರಾಜ್ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.