ನಬಾರ್ಡ್ ಯೋಜನೆಯಡಿ ೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ವಿದ್ಯಾರ್ಥಿನಿಲಯವು ನೆಲ ಅಂತಸ್ತು, ಮೊದಲನೇ ಮಹಡಿ ಹಾಗೂ ೨ನೇ ಮಹಡಿಯನ್ನು ಹೊಂದಿದ್ದು, ಸುಮಾರು ೨೪ ಕೊಠಡಿಗಳು, ಗ್ರಂಥಾಲಯ, ಅಡುಗೆ ಕೋಣೆ, ಶೌಚಾಲಯಗಳು ಸೇರಿದಂತೆ ಸುಸಜ್ಜಿತವಾದ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದೆ.

ಗುಣಮಟ್ಟದ ಕಾಮಗಾರಿ ನಡೆಸಬೇಕು. ಈ ಹಾಸ್ಟೆಲ್ ನಿರ್ಮಾಣ ಕಾರ್ಯವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ, ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸೋನಿಯಾ ವರ್ಣೇಕರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್. ರಂಗಸ್ವಾಮಿ ಉಪಸ್ಥಿತರಿದ್ದೆರು.