ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (Karnataka New Chief Minister DK Shivakumar) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ, ಹೈಕಮಾಂಡ್ (Congress Highcommand) ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಿಸಲಾಗಿದೆ. ಇದನ್ನೂ ಓದಿ : ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪನೆ
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ನಿರ್ಣಯದ ಪತ್ರದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ, ತಮಗೆ ಬಹುಮತ ಇರುವ ಬಗ್ಗೆ ಮಾಹಿತಿ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಈ ಪ್ರಕ್ರಿಯೆಯು ಮುಗಿದ ಕೂಡಲೇ ರಾಜಭವನದಿಂದ ಅಧಿಕೃತ ಆಹ್ವಾನ ಹೊರಬೀಳಲಿದೆ.
ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಈಗಾಗಲೇ ದಿನಾಂಕ ಮತ್ತು ಸಮಯ ನಿಗದಿಯಾಗಿದೆ. ಬರುವ ಬುಧವಾರ (ಜೂನ್ 3, 2026) ಸಂಜೆ 4.05 ಗಂಟೆಗೆ ಬೆಂಗಳೂರಿನ ಲೋಕಭವನದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ದೆಹಲಿಯ ಹೈಕಮಾಂಡ್ ನಾಯಕರು ಹಾಗೂ ನೆರೆಯ ರಾಜ್ಯಗಳ ಗಣ್ಯರು ಸಾಕ್ಷಿಯಾಗಲಿದ್ದಾರೆ.
