ಬಂಟ್ವಾಳ: ದೇವರಾಜು ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ವತಿಯಿಂದ ಮಾನ್ಯ ಶಾಸಕರ ಶಿಫರಾಸ್ಸಿನ ಮೇರೆಗೆ 26 ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪಾಡಿಯವರು ಬಿ.ಸಿ ರೋಡ್ ನ ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವರಾಜು ಅರಸು ಹಿಂ.ವರ್ಗ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಜಯಶ್ರೀ, ಸಿಬಂದಿ ಸುಶ್ಮಿತ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.