ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ಸ್ಪರ್ ರಸ್ತೆಯ 614 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಇಂದು ಧರ್ಮಸ್ಥಳದಲ್ಲಿ ಚಾಲನೆ ನೀಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ಸಂಧರ್ಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ಸಂಸದರ ಜೊತೆಗೂಡಿ ಶಿಲಾನ್ಯಾಸ ನೆರವೇರಿಸಿದರು. ಇದನ್ನೂ ಓದಿ :ನ. 26 ಶಂಭೂರು ಷಷ್ಠಿ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ಹೆದ್ದಾರಿ ನಿರ್ವಹಣೆ ಯೋಜನೆಯಲ್ಲಿ ಈ ರಸ್ತೆ ಅಭಿವೃದ್ದಿ ಹೊಂದಲಿದೆ. ರಸ್ತೆ ವಿಸ್ತರಣೆ, ಕಿರು ಸೇತುವೆ, ಸೇತುವೆ ಅಂಡರ್ ಪಾಸ್ ಈ ಕಾಮಗಾರಿ ಒಳಗೊಂಡಿದೆ.

