ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ (Dileep Raj) ಇಂದು ಬೆಳಗಿನ ಜಾವ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ.
ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ʼಲವ್ ಮಾಕ್ಟೇಲ್ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.
ಇಂದು ಬೆಳಗಿನ ಜಾವ ದಿಲೀಪ್ ರಾಜ್ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ. ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
