ಬಂಟ್ವಾಳ ತಾಲೂಕಿನ ಬೊಂಡಾಲ ದ. ಕ. ಜಿ. ಪಂ.ಹಿ.ಪ್ರಾ. ಶಾಲಾ ಮಕ್ಕಳಿಗೆ ಸರಕಾರದಿಂದ ಉಚಿತವಾಗಿ ನೀಡುವ ಶೂ ಸಾಕ್ಸ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜನಾರ್ಧನ ಕುಲಾಲ್ ಮಕ್ಕಳಿಗೆ ಶೂ ಸಾಕ್ಸ್ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ.ಎಚ್ ಸ್ವಾಗತಿಸಿ, ಶಿಕ್ಷಕಿ ಲಾವಣ್ಯ ವಂದಿಸಿ, ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಭವ್ಯ, ಕಿಶೋರಿ ಸಹಕರಿಸಿದರು.