ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಇಂದು ಜಿಲ್ಲಾ ಅಭಿವೃದ್ಧಿ, ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಆಯಾ ಇಲಾಖೆಗಳು ಕೈಗೊಂಡ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಪರಿಶೀಲನೆ ನಡೆಯಿತು. ಬಾಕಿ ಉಳಿದಿರುವ ಅಭಿವೃದ್ಧಿ ಯೋಜನೆ ಕಾಮಗಾರಿಗಳನ್ನು ತ್ವರಿತಗೊಳಿಸಲು ಮತ್ತು ವೇಳಾಪಟ್ಟಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇದನ್ನೂ ಓದಿ : ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ
ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಹೆಸರು ಬದಲಾಯಿಸಬೇಕು ಎಂಬ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು ಈ ಕುರಿತ ನಿರ್ಣಯಕ್ಕೆ ಎಲ್ಲ ಜಿಲ್ಲೆಯ ಶಾಸಕರೂ ಬೆಂಬಲ ಸೂಚಿಸಿದರು..