ಕ್ರೀಡೆಗಳು ಜನರನ್ನು ಬೆಸೆಯುವ ಉತ್ತಮ ಮಾಧ್ಯಮವಾಗಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಸಂದರ್ಭದಲ್ಲಿ ಕ್ರೀಡೆಗಳಲ್ಲಿ ತೊಡಗಿಕೊಂಡರೆ ಅವರಲ್ಲಿ ಸ್ಫರ್ಧಾ ಸ್ಫೂರ್ತಿಯನ್ನುಉಂಟು ಮಾಡಿ ಜೀವನೋತ್ಸಾಹವನ್ನುತರುತ್ತದೆ ಎಂದು ಶ್ರೀ ಉಮಾನಾಥ ರೈ ಅಧ್ಯಕ್ಷರು ಸರಕಾರಿ ನೌಕರರ ಸಂಘ ಬಂಟ್ವಾಳ ಇವರು ನುಡಿದರು.

ಅವರು ಸೆ.20 ರಂದು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ, ಬಂಟ್ವಾಳ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನುವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮಿಕಾಲೇಜಿನ ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್‌ಡಿ.ಎಂ. ಅವರು ಮಾತನಾಡಿ ಕ್ರೀಡೆಗಳಿಂದ ವಿದ್ಯಾರ್ಥಿಗಳ ಮನೋಬಲ ವೃದ್ಧಿಯಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಯಾವುದಾದರೊಂದು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರಆತ್ಮಸ್ಥೈರ್ಯ ಹೆಚ್ಚುವುದು ಎಂದರು. ಶ್ರೀ. ಶಿವಪ್ರಸಾದ್ ರೈ ಕೆ. ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿಗಳು ಬಂಟ್ವಾಳ ತಾಲೂಕುಇವರು ಪ್ರಾಸ್ತವಿಕ ಭಾಷಣ ಮಾಡಿದರು. ಮುಖ್ಯ ಅಥಿತಿಗಳಾಗಿ ಶ್ರೀ ಶಿವ ಪ್ರಸಾದ್ ಶೆಟ್ಟಿ ಜಿಲ್ಲಾ ಅಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಶ್ರೀ.ಜಯರಾಮ ಅಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ , ಶ್ರೀ ಜಗದೀಶ್‌ರೈ ಉಪಾಧ್ಯಕ್ಷರು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದ.ಕ, ಶ್ರೀ ಹೇಮೋದರ್‌ಜೊತೆ ಕರ‍್ಯದರ್ಶಿಗಳು, ಕರ್ನಾಟಕರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಶನ್ ರವರು ಉಪಸ್ಥಿತರಿದ್ದರು. ಶ್ರೀ ಹರಿಪ್ರಸಾದ್ ಮುಖ್ಯೋಪಾಧ್ಯಾಯರು ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳಸ್ವಾಗತಿಸಿ, ಶ್ರೀಮತಿ ಚೈತ್ರ ಶೆಟ್ಟಿ ನಿರೂಪಿಸಿ, ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣದ ಮೇಲ್ವಿಚಾರಕರಾದ ಶ್ರೀ ಮಹೇಶ್ ಶೆಟ್ಟಿಧನ್ಯವಾದ ಆರ್ಪಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ 7 ತಾಲೂಕುಗಳಿಂದ ಒಟ್ಟು 28ಕ್ರೀಡಾ ತಂಡಗಳು ಭಾಗವಹಿಸಿದ್ದರು. ಪಂದ್ಯಾಟದಲ್ಲಿ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಸೈಂಟ್ ಅಲೋಶಿಯಸ್ ಆಂಗ್ಲಮಾಧ್ಯಮ ಶಾಲೆ, ಉರ್ವ ಪ್ರಥಮ ಸ್ಥಾನವನ್ನು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲಗುಡ್ಡೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಭಾರತಿ ಆಂಗ್ಲ ಮಾಧ್ಯಮ ಶಾಲೆ, ಉಳ್ಳಾಲ ಹಾಗೂ ದ್ವಿತೀಯ ಸ್ಥಾನವನ್ನು ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಪಡೆದುಕೊಂಡಿತು.

ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಪ್ರಥಮ ಸ್ಥಾನವನ್ನು ಹಾಗೂ ಭಾರತಿಆಂಗ್ಲ ಮಾಧ್ಯಮ ಶಾಲೆ, ಉಳ್ಳಾಲ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸೈಂಟ್ ಅಲೋಶಿಯಸ್ ಆಂಗ್ಲಮಾಧ್ಯಮ ಶಾಲೆ, ಉರ್ವಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಹಾಗೂ ಭಾರತಿಆಂಗ್ಲ ಮಾಧ್ಯಮ ಶಾಲೆ, ಉಳ್ಳಾಲ, ಇವರುದ್ವಿತೀಯ ಸ್ಥಾನವನ್ನುಪಡೆದುಕೊಂಡಿತು.
ವಿಜೇತತಂಡಕ್ಕೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿಗೌರವಿಸಲಾಯಿತು.