ಇನ್ನರ್ ವೀಲ್ ಕ್ಲಬ್ ಮಂಗಳೂರು ಸೌತ್ ವತಿಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ವಿಜ್ಞಾನ ಪ್ರಯೋಗಾಲಯಕ್ಕೆ ಬೇಕಾದ ಉಪಕರಣಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್, ಎನ್.ಆರ್.ವಿ ಮುಖ್ಯಸ್ಥೆ ಪ್ರಮೋದ ಬೋಳಾರ್, ರೋಟರಿ ಕ್ಲಬ್ ಮಂಗಳೂರು ದಕ್ಷಿಣದ ನಿಕಟ ಪೂರ್ವ ಅಧ್ಯಕ್ಷರಾದ ನಂದಿನಿ, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಉಷಾಲಾಕ್ಷಿ, ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಪ್ರಿಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಗಳಾದ ಪ್ರಸಾದ್ ಬೋರುಗುಡ್ಡೆ, ಜಯಪ್ರಕಾಶ್, ದಾಮೋದರ್, ಕೇಶವ, ಚಿತ್ರ, ಶಶಿ, ಜಯಶ್ರೀ, ಶಾಲಾ ಮುಖ್ಯ ಶಿಕ್ಷಕಿ ಪ್ರೇಮ, ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.