ಬೀಜಿಂಗ್: ಚೀನಾದ (China) ಹುನಾನ್ (Hunan) ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ (Xi Jinping) ತನಿಖೆಗೆ ಆದೇಶಿಸಿದ್ದಾರೆ.
ಯುಎಇನಲ್ಲಿ ಡ್ರೋನ್ ದಾಳಿ; ಮೂವರು ಭಾರತೀಯರಿಗೆ ಗಾಯ
ಮತ್ತೊಂದು ಕಡೆ ಯುಎಇಯ (UAE) ತೈಲ ಸಂಗ್ರಹಣಾ ಕೇಂದ್ರದ ಮೇಲೆ ನಡೆದ ಡ್ರೋನ್ ದಾಳಿಯಿಂದ (Drone Attack) ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಭಾರತೀಯರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
