ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ (57) ಜೂ.11ರಂದು ರಾತ್ರಿ 9. 45ಕ್ಕೆ ಶ್ವಾಸಕೋಶದ ಕ್ಯಾನ್ಸರ್‌ನಿಂದ ನಿಧನ ಹೊಂದಿದರು ಎಂದು ಪತಿ ನಾಗರಾಜ್ ವಸ್ತಾರೆ ತಿಳಿಸಿದ್ದಾರೆ.

ನಿರೂಪಕಿ ಅಪರ್ಣಾ

ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.

ನಿರೂಪಕಿ ಅಪರ್ಣಾ

ಇಂಗ್ಲಿಷ್‌‌ ಮೂಲಕ ಅನುವಾದಿತ-ಅಪರ್ಣಾ ಬಾಲಮುರಳಿ ಅವರು ಭಾರತೀಯ ನಟಿ ಮತ್ತು ಹಿನ್ನೆಲೆ ಗಾಯಕಿ, ಇವರು ಪ್ರಾಥಮಿಕವಾಗಿ ತಮಿಳು ಚಿತ್ರಗಳ ಜೊತೆಗೆ ಮಲಯಾಳಂ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ಅಪರ್ಣಾ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿ ಸೌತ್‌ಗೆ ಭಾಜನರಾಗಿದ್ದಾರೆ.

ಕಿರುತೆರೆಯಲ್ಲಿ ʻಮೂಡಲಮನೆʼ, ʻಮುಕ್ತʼ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆʼಗೆ ಧ್ವನಿ ಗೂಡಿಸಿದ್ದರು.

ಅಪರ್ಣಾ

ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) ಇರುವುದು ತಪಾಸಣೆಯಲ್ಲಿ ಗೊತ್ತಾಯ್ತು. ಅದಾಗಲೇ ನಾಲ್ಕನೇ ಹಂತದಲ್ಲಿತ್ತು. ಮೊದಲು ನೋಡಿದಾಗ ವೈದ್ಯರು ಇನ್ನೂ 6 ತಿಂಗಳು ಬುಕಿದ್ದರೆ ಹೆಚ್ಚು ಅಂತ ಹೇಳಿದ್ದರು. ಆದ್ರೆ ಅವಳು ಛಲಗಾತಿ, ಏನಾದರೂ ಗೆದ್ದೇ ಗೆಲ್ಲುತ್ತೇನೆ ಅನ್ನುವ ಛಲವಿತ್ತು. ಅದಾದಮೇಲೂ ಒಂದೂವರೆ ವರ್ಷ ಹೋರಾಡಿದಳು. ಆದ್ರೆ ಕಳೆದ ಫೆಬ್ರವರಿ ತಿಂಗಳಿನಿಂದ ಸೋತಿದ್ದಳು. ಏಕೆಂದರೆ ಇದು ದೇಹವೇ ದೇಹವನ್ನ ಬಾಧಿಸುವ ವ್ಯಾದಿ, ನಾನು ಅರಿತಿರುವ ಹಾಗೆಯೇ ಕ್ಯಾನ್ಸರ್‌ ಅನ್ನೋದು ನೀನಲ್ಲದ ಇನ್ನೊಂದು ವ್ಯಕ್ತಿತ್ವವನ್ನ ಹೇರಲು ಬಯಸುತ್ತೆ. ಅವಳು ಧೀರೆ ಇಷ್ಟು ವರ್ಷ ಸಾಧ್ಯವಾದಷ್ಟೂ ಮಣಿಸಿದಳು. ಎಂದು ಪತಿ ಭಾವುಕವಾಗಿ ನುಡಿದಿದ್ದಾರೆ.