ಬಂಟ್ವಾಳ ತಾಲೂಕಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೃಷ್ಣನಗರ -ಫರಂಗಿಪೇಟೆ ಇದರ ವತಿಯಿಂದ ಆಚರಿಸುವ 43 ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬಳಿಕ ಸಾರ್ವಜನಿಕ ಉಪಯೋಗಕ್ಕೆ ಅಂಬ್ಯುಲೆನ್ಸ್ ವಾಹನವನ್ನು ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಲೋಕಾರ್ಪಣೆ ಮಾಡಿದರು
.ಕುಂದಾಪುರದ ಸಹಾಯಕ ಕಮೀಷನರ್ ರಶ್ಮಿ ಎಸ್ ಆರ್. ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಭಕ್ತರಿಗೆ ಭತ್ತದ ತೆನೆಯನ್ನು ವಿತರಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ಸೇವಾ ಪ್ರತಿಷ್ಠಾನದ ಸ್ಥಾಪಕರಾದ ಕೃಷ್ಣಕುಮಾರ್ ಪೂಂಜಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.