ರಾಮನಗರ: ಕನಕಪುರದಲ್ಲಿ (Kanakapur) ಅಡುಗೆ ಮಾಡುವಾಗ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ (Fire Accident) ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ : ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ಚರಣ್ ಪತ್ನಿ ಉಪಾಸನಾ
ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50), ಪ್ರಶಾಂತ್ (22) ಎಂದು ಗುರುತಿಸಲಾಗಿದೆ. ಕನಕಪುರ ನಗರದ ಅಮರನಾರಾಯಣ ಬ್ಲಾಕ್ನಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಗ್ಯಾಸ್ ಸೋರಿಕೆಯಾಗಿ ಈ ಅಗ್ನಿ ಅವಘಡ ಸಂಭವಿಸಿತ್ತು. ಗಾಯಾಳುಗಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನಿಡಲಾಗುತ್ತಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಮೂವರೂ ಸಾವನ್ನಪ್ಪಿದ್ದಾರೆ.
ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಮೃತಪಟ್ಟ ತಂದೆ, ತಾಯಿ ಹಾಗೂ ಮಗನನ್ನು ನೆನೆದು ಸಂಬಂಧಿಕರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.
