ಕಲ್ಲಡ್ಕ ದಲ್ಲಿ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಫೆಬ್ರವರಿ 13 ಶುಕ್ರವಾರ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ಆಶಯದಲ್ಲಿ ವಿವಿಧ ಸಂಘಟನೆಗಳಾದ ಲಯನ್ಸ್ ಕ್ಲಬ್ ಅಮ್ಟೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ (ರಿ) ಗೋಳ್ತಮಜಲು, ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ ಬಾಳ್ತಿಲ, ಆಯುಷ್ಮಾನ್ ಆರೋಗ್ಯ ಕೇಂದ್ರ ಗೋಳ್ತಮಜಲು, ಹಾಗೂ ವಿಜನ್ ಸ್ಪ್ರಿಂಗ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ ಜರಗಿತು. ಇದನ್ನೂ ಓದಿ : ಫೆ. 15 ಪೆರಾಜೆಗುತ್ತು ಶ್ರೀ ಗುಡ್ಡೆಚಾಮುಂಡಿ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶದ ಚಪ್ಪರ ಮುಹೂರ್ತ
ಶಿಬಿರದಲ್ಲಿ ರಕ್ತದ ಒತ್ತಡ ತಪಾಸಣೆ, ಮಧುಮೇಹ ತಪಾಸಣೆ, ಅಭಾ ನೋಂದಣಿ ಹಾಗೂ ಉಚಿತ ಕಣ್ಣಿನ ತಪಾಸಣೆಗಳನ್ನು ನಡೆಸಲಾಯಿತು. ಉದ್ಘಾಟನಾ ಸಭಾ ಕಾರ್ಯಕ್ರಮವು ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಕೊಟ್ಟಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಲ್ಲಡ್ಕ ಬಾಳ್ತಿಲ ಆರೋಗ್ಯ ಕೇಂದ್ರದ ಡಾ. ಜಯಪ್ರಕಾಶ್ ಅವರು ಆರೋಗ್ಯದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರೇಮ ಪುರುಷೋತ್ತಮ, ಲಯನ್ಸ್ ಕ್ಲಬ್ ಅಂಮ್ಟೂರು ಅಧ್ಯಕ್ಷರಾದ ಶ್ರೀ ಎಲಿಯಾಸ್ ಡಿಸೋಜಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಸುನೀಲ್ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಜಯಪ್ರಕಾಶ್, ಸಮುದಾಯ ಆರೋಗ್ಯ ಅಧಿಕಾರಿ ಡಾ. ಆಕಾಶ್, ವಿಜನ್ ಸ್ಪ್ರಿಂಗ್ ಸಂಸ್ಥೆಯ ಇನ್‌ಚಾರ್ಜ್ ಶ್ರೀ ಜಲೀಲ್, ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಶ್ರೀಮತಿ ಕುಸುಮ, ತಾಲೂಕು ವ್ಯವಸ್ಥಾಪಕ ಶ್ರೀ ಪ್ರದೀಪ್ ಉಪಸ್ಥಿತರಿದ್ದರು.
.
ಲಯನ್ಸ್ ಕ್ಲಬ್ ವತಿಯಿಂದ ಮೊದಲ 50 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಯಿತು. ಲೀಲಾ ಡಿ. ಶೆಟ್ಟಿ ಪ್ರಾರ್ಥಿಸಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಪುಷ್ಪ ಸ್ವಾಗತಿಸಿ, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ಭವಾನಿ ಕಾರ್ಯಕ್ರಮ ನಿರೂಪಿಸಿದರು.
