ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. (ರಿ.)ಟ್ರಸ್ಟ್ ವಿಟ್ಲ ಇದರ ಮಾಣಿ ವಲಯದ ಆಶ್ರಯದಲ್ಲಿ ಕಂಬಳಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತಾ ಅರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕಂಬಳಬೆಟ್ಟು ಹಿ.ಪ್ರಾ.ಶಾಲೆಯಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ
ವೈದ್ಯನಾಥ ಮಲರಾಯ ಸಹ ಪರಿವಾರ ದೈವಸ್ಥಾನ ಬ್ರಹ್ಮಕಲೊತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕರು ಆಗಿರುವ ವಸಂತ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್, ಶಾಲಾ ಮುಖ್ಯ ಶಿಕ್ಷಕಿ ವಾರಿಜಾ, ಅಳಕೆಮಜಲು ಒಕ್ಕೂಟದ ಅಧ್ಯಕ್ಷ ಚಂದ್ರಹಾಸ ನಾಯ್ಕ, ಇಡ್ಕಿದು ಒಕ್ಕೂಟ ಅಧ್ಯಕ್ಷರಾದ ದೇಜಪ್ಪ ಪೂಜಾರಿ, ಉಪಸ್ಥಿತರಿದ್ದರು.
ಮಾಣಿ ವಲಯ ಮೇಲ್ವಿಚಾರಕಿ ಆಶಾಪಾರ್ವತಿ ಸ್ವಾಗತಿಸಿ, ಅಳಕೆ ಮಜಲು ಒಕ್ಕೂಟದ ಸೇವಾಪ್ರತಿನಿಧಿ ಸುಗಂಧಿನಿ ವಂದಿಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.
ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.