ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಬಂಟ್ವಾಳ ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಬಂಟ್ವಾಳ ಇದರ ಬಿಸಿ ರೋಡು ವಲಯದ ಕಾರ್ಯಕ್ಷೇತ್ರದ ಜ್ಞಾನ ವಿಕಾಸಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳುಗಳ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಭಂಡಾರಿ ಬೆಟ್ಟು ವ್ಯಾಯಾಮ ಶಾಲೆ ಯಲ್ಲಿ ಪ್ರಾರಂಭಿಸಲಾಯಿತು.  ಇದನ್ನೂ ಓದಿ :ಗೃಹ ಸಚಿವರಾದ ಡಾ|ಜಿ.ಪರಮೇಶ್ವರ್‌ ಅವರಿಂದ ‘ಕರ್ನಾಟಕ ಕ್ರೀಡಾಕೂಟ 2025-26’ರ ಲಾಂಛನ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಉಚಿತವಾಗಿ ನೀಡುವ ಟೈಲರಿಂಗ್ ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವ ಉದ್ಯೋಗಿಗಳಾಗಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಿ ಎಂದರು.
ಬಂಟ್ವಾಳ ನಗರ ಪೊಲೀಸ್ ಠಾಣಾ ಎ ಎಸ್ ಐ ನಾರಾಯಣ್ ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು,
ಈ ಸಂದರ್ಭದಲ್ಲಿ ಹೆಡ್ ಕಾನ್ಸ್ಟೇಬಲ್ ಧನ್ಯಶ್ರೀ ಜ್ಞಾನ ವಿಕಾಸ ಸದಸ್ಯರಿಗೆ ಹಾಗೂ ಟೈಲರಿಂಗ್ ಶಿಬಿರಾರ್ಥಿಗಳಿಗೆ ಕಾನೂನು ಅರಿವುನ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸವಿತಾ, ವಲಯದ ಮೇಲ್ವಿಚಾರಕ ಗಿರೀಶ್, ಟೈಲರಿಂಗ್ ಶಿಕ್ಷಕಿ ವಸಂತಿ, ಒಕ್ಕೂಟದ ಉಪಾಧ್ಯಕ್ಷೆ ಲಕ್ಷ್ಮಿ,ಸೇವಾ ಪ್ರತಿನಿಧಿ ವನಿತಾ, ವನಜಾಕ್ಷಿ, ಭವ್ಯ, ಜ್ಞಾನ ವಿಕಾಸ ಸದಸ್ಯರುಗಳು, ಟೈಲರಿಂಗ್ ಕಲಿಕಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಸುಮಾರು 30 ಮಂದಿ ಶಿಬಿರಾರ್ಥಿಗಳು ಉಚಿತ ಟೈಲರಿಂಗ್ ಕಲಿಕಾ ಶಿಬಿರಕ್ಕೆ ನೊಂದಾವಣಿ ಮಾಡಿಕೊಂಡಿದ್ದಾರೆ.