ಕೊಪ್ಪಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Explosion) 7 ಜನ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ (Gangavati) ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಹುಸೇನಮ್ಮ ಮನೆಯಲ್ಲಿ ಹೊಸದಾಗಿ ಸಿಲಿಂಡರ್ ತೆಗೆದುಕೊಂಡಿದ್ದರು. ಬೆಳಗ್ಗೆ ಆನ್ ಮಾಡುವಾಗ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ನೆಲಸಮವಾಗಿದೆ. ಅಲ್ಲದೇ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಮನೆಯ ಅಕ್ಕಪಕ್ಕ ನಿಂತವರಿಗೂ ಸುಟ್ಟ ಗಾಯಗಳಾಗಿವೆ.
