ಬಂಟ್ವಾಳ ಶ್ರೀ ವೆಂಕಟರಮಣಸ್ವಾಮಿ ಸಮೂಹ ವಿದ್ಯಾ ಸಂಸ್ಥೆ : ವಾರ್ಷಿಕ ಕ್ರೀಡಾ ಕೂಟ
ಬಂಟ್ವಾಳ: ಕ್ರೀಡೆ ಮನುಷ್ಯನ ಜೀವನದಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದರೊಂದಿಗೆ ಶಾರೀರಿಕ ಹಾಗೂ ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಶಾಲಾ ಶಿಕ್ಷಣದಲ್ಲಿ ಓದಿನೊಂದಿಗೆ ಕ್ರೀಡೆಗೆ ಪ್ರಾಮುಖ್ಯತೆ ನೀಡಿದಲ್ಲಿ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಅಧ್ಯಯನಕ್ಕೆ ಕೊಡುವಷ್ಟೇ ಮಹತ್ವವನ್ನು ಕ್ರೀಡೆಗೆ ನೀಡಬೇಕು ಎಂದು ಅಭಿಮತ ವಾಹಿನಿಯ ಪಾಲುದಾರರಾದ ಡಾ.ಮಮತಾ ಪಿ ಶೆಟ್ಟಿ ನುಡಿದರು.
ಇದನ್ನು ಒದಿ ಟೇಕಾಫ್ ಆಗ್ತಿದ್ದತೆ ಆಗಸದಿಂದ ಬೆಂಕಿಯುಂಡೆಯಾಗಿ ಅಪ್ಪಳಿಸಿ ಪಲ್ಟಿಯಾದ ವಿಮಾನ
ಅವರು ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾ ಸಂಸ್ಥೆಯ ಸಂಚಾಲಕಿ ಶ್ರೀಮತಿ ಕೆ ರೇಖಾ ಶೆಣೈ ವಹಿಸಿದ್ದರು.
ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ವೆಂಕಟರಮಣಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್ ಬಿ ಅತಿಥಿಗಳನ್ನು ಪರಿಚಯಿಸಿದರು. ಬಿ.ಆರ್.ಎಂ.ಪಿ.ಸಿ. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಪೂರ್ಣೇಶ್ವರಿ ಭಟ್ ಸ್ವಾಗತಿಸಿ, ಎಸ್.ವಿ.ಎಸ್. ಇಂಗ್ಲೀಷ್ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ವಂದಿಸಿದರು. ದೈಹಿಕ ಶಿಕ್ಷಕಿ ಪ್ರತೀಕ್ಷಾ ಕ್ರೀಡಾದಿನದ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳಾದ ಅನನ್ಯಾ ತಂಡದವರು ಪ್ರಾರ್ಥಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನೆರವೇರಿತು. ಸಮೂಹ ವಿದ್ಯಾಸಂಸ್ಥೆಗಳ ದೈಹಿಕ ಶಿಕ್ಷಕರಾದ ರಾಜೇಶ್ ಕುಮಾರ್ ಕೆ ಹಾಗೂ ಬಸವರಾಜ ಹನುಮಂತ ಕಾಂಬ್ಳೆರವರು ಕ್ರೀಡಾಚಟುವಟಿಕೆಗಳನ್ನು ನೆರವೇರಿಸಿದರು.