ನಮ್ಮನ್ನು ಸಾಧನೆಗೆ ಒಡ್ಡಿಕೊಂಡಾಗ ಸಾರ್ಥಕತೆ ಕಾಣಬಹುದು. ನಂಬಿಕೆ, ಆತ್ಮವಿಶ್ವಾಸ ಇದ್ದಾಗ ಗುರಿ ಸಾಧನೆ ಸಾಧ್ಯ. ಅಧ್ಯಾತ್ಮದಲ್ಲಿ ತೊಡಗಿಸಿಕೊಂಡಾಗ ಮಾನಸಿಕ ನೆಮ್ಮದಿ ದೊರಕುವುದು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಅವರು  ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅನ್ನಪೂರ್ಣ ಸಭಾಭವನದಲ್ಲಿ ನಡೆದ ಒಡಿಯೂರು ಗ್ರಾಮವಿಕಾಸ ಯೋಜನೆಯ ಪುಣಚ ಘಟ ಸಮಿತಿಯ ವಾರ್ಷಿಕೋತ್ಸವ ಮತ್ತು  ಶ್ರೀ ಸತ್ಯದತ್ತ ವ್ರತ ಪೂಜೆಯ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ಪುಣಚ ಶ್ರೀಮಹಿಷ ಮರ್ದಿನಿ ದೇವಸ್ಥಾನ ಆಡಳಿತ ಮಂಡಳಿ ಉಪಾಧ್ಯಕ್ಷ ಬೈಲುಗುತ್ತು ಮಾರಪ್ಪ ಶೆಟ್ಟಿ, ಪುಣಚ ಗ್ರಾಮ ಪಂಚಾಯತಿ ಅಧ್ಯಕ್ಷೆ ಬೇಬಿ , ಶ್ರೀ ಗ್ರಾಮ ವಿಕಾಸ ಯೋಜನೆ ನಿರ್ದೇಶಕ ಕಿರಣ್ ಉರ್ವ, ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರೀತಂ ಪೂಂಜ ಅಗ್ರಾಳ ಮತ್ತು  ಘಟ ಸಮಿತಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭ ದಾನಿಗಳನ್ನು ಒಡಿಯೂರು ಶ್ರೀಗಳು ಗೌರವಿಸಿದರು.
ಪೂಜಾ ಸಮಿತಿ ಅಧ್ಯಕ್ಷ ಉದಯ ಕುಮಾರ್ ದಂಬೆ ಸ್ವಾಗತಿಸಿ,  ಉಮಾ ರೈ ವಂದಿಸಿದರು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಮೇಲ್ವಿಚಾರಕಿ ಲೀಲಾ ಕಾರ್ಯಕ್ರಮ ನಿರೂಪಿಸಿದರು.
ಬೆಳಿಗ್ಗೆ ಚಂದ್ರಶೇಖರ ಉಪಾಧ್ಯಾಯ ತಂಡದ ನೇತೃತ್ವದಲ್ಲಿ ಶ್ರೀ ಸತ್ಯದತ್ತ ವ್ರತ ಪೂಜೆ ನಡೆಯಿತು.