ಮಂಗಳೂರಿನ ಮೀನುಗಾರಿಕಾ ಬಂದರಿಗೆ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಇಂದು ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು, ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜೊತೆಗೆ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಚಚ್೯ಸಿದರು.

ಇನ್ನು ಮೀನುಗಾರರು ಪ್ರೀತಿಯಿಂದ ಅಂಜಲ್ ಮೀನನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು. ಅವರ ಆತ್ಮೀಯತೆ ಹಾಗೂ ಪ್ರೀತಿಗೆ ಧನ್ಯವಾದ ತಿಳಿಸಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಜೊತೆಗಿದ್ದರು.
