ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಚಿಕ್ಕಮಧುರೆ ಗ್ರಾಮದಲ್ಲಿ ಆಯೋಜಿಸಿದ್ದ ಗ್ರಾಮ ಚಲೋ ಅಭಿಯಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಿದರು.
ಗ್ರಾಮಗಳ ಪ್ರತಿ ಮನೆಗಳಲ್ಲಿಯೂ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನಪರ ಯೋಜನೆಗಳ ಫಲಾನುಭವಿಗಳಿದ್ದು, ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮಗದೊಮ್ಮೆ ಮೋದಿಜೀ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಂಕಲ್ಪ ತೊಡಲಾಯಿತು.
ಈ ಸಂದರ್ಭದಲ್ಲಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ Dheeraj Muniraj , ಯಲಹಂಕ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ SR Vishwanath , ಮಾಜಿ ಸಚಿವರಾದ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು, ಜಿಲ್ಲಾಧ್ಯಕ್ಷರಾದ ಶ್ರೀ ರಾಮಕೃಷ್ಣಪ್ಪ, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೇರಿ, ಮುಖಂಡರಾದ ಶ್ರೀ ಅಲೋಕ್ ವಿಶ್ವನಾಥ್ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.