ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಕರ್ನಾಟಕ‌ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಮಗದಿಂದ “ಪೊಲೀಸ್ ಠಾಣೆ ಕಟ್ಟಡ” ಹಾಗೂ ಕೆ.ಎಸ್.ಟಿ.ಡಿ.ಸಿ “ಮಯೂರ ಪೈನ್‌ಟಾಪ್ ಸನ್‌ ರೈಸ್ ರೆಸ್ಟೋರೆಂಟ್” ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜೊತೆಗೂಡಿ ಗೃಹ ಸಚಿವ ಡಾ| ಜಿ.ಪರಮೇಶ್ವರ್‌  ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ :  ದೇಶಮಟ್ಟದಲ್ಲಿ ಎನ್ ಡಿ ಆರ್ ಎಫ್ ತಂಡದ ರೀತಿ ಗ್ರಾಮಮಟ್ಟದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಪ್ರಾಮುಖ್ಯತೆ ಪಡೆದಿದೆ – ಕಮಾಂಡರ್ ಶಾಂತಿಲಾಲ್ ಜಟಿಯಾ

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜೊತೆಗೂಡಿ ಗೃಹ ಸಚಿವ ಡಾ| ಜಿ.ಪರಮೇಶ್ವರ್‌  ಶಂಕುಸ್ಥಾಪನೆ

ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ನಾಡಿನಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ, ಸರ್ವರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್, ಡಾ. ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಎನ್.ಎಸ್.ಬೋಸರಾಜು, ಬೈರತಿ ಸುರೇಶ್, ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತರಿದ್ದರು.