ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಅಳಿಕೆ ವಲಯದ ಕನ್ಯಾನ ಬಿ. ಕಾರ್ಯಕ್ಷೇತ್ರದ ದೆಲಂತಬೆಟ್ಟು ರಂಜಿತ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್, ಕನ್ಯಾನ ಬಿ. ಒಕ್ಕೂಟ ಉಪಾಧ್ಯಕ್ಷ ಚಂದ್ರ, ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ, ಪದಾಧಿಕಾರಿ ಶಂಕರ್, ಒಕ್ಕೂಟ ಸೇವಾ ಪ್ರತಿನಿಧಿ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.