ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು   ಶುಭ ಕೋರಿದರು. ಇದನ್ನೂ ಓದಿ : ‘ಮನರೇಗಾ ಉಳಿಸಿ ಆಂದೋಲನದ” ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮ
ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.