ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. 10 ರಂದು ಶಾಲಾ ವಿದ್ಯಾರ್ಥಿನಿಯರಿಗಾಗಿ ಸ್ವಚ್ಚತೆ ಮತ್ತು ಆರೋಗ್ಯದ ಬಗ್ಗೆ ವಿಶೇಷ ಕಾರ್ಯಕ್ರಮ ನಡೆಸಲಾಯಿತು.

ಅಧ್ಯಕ್ಷತೆಯನ್ನು ವಹಿಸಿದ ಫ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಹರಿಪ್ರಸಾದ್ ಹಿತನುಡಿಗಳನ್ನು ನುಡಿದರು.

ಮುಖ್ಯ ಅತಿಥಿಗಳಾಗಿ ಡಾ. ನಿಧಿ ಶೆಟ್ಟಿ, ಪ್ರಾಧ್ಯಾಪಕರು ಕಮ್ಯುನಿಟಿ ಮೆಡಿಸಿನ್ ವಿಭಾಗ, ಎ.ಜೆಆಸ್ಪತ್ರೆ, ಮಂಗಳೂರು ಅವರು ಹದಿಹರೆಯ ಹೆಣ್ಣು ಮಕ್ಕಳ ದೈಹಿಕ ಬದಲಾವಣೆ ನಿಸರ್ಗದತ್ತವಾದ ಸಹಜಕ್ರಿಯೆ ಹೆದರುವ ಅವಶ್ಯಕತೆ ಇಲ್ಲ. ಸ್ವಚ್ಚತೆ ಮತ್ತುಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಅರಿವು ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಅಕ್ಷರಿ ಇಂಟರ್‌ನ್‌ಶಿಪ್ ಕಮ್ಯುನಿಟಿ ಮೆಡಿಸಿನ್ ವಿಭಾಗ, ಶ್ರೀಮತಿ ಮಂಜುಳಾ ಆಶಾ ಕಾರ್ಯಕರ್ತೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಸತೀಶ್ ಬಂಗೇರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಹೇಮಲತಾ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಿಯರಾದ ಕುಮಾರಿ ವೈಷ್ಣವಿ ಭಟ್ ಸ್ವಾಗತಿಸಿದರು. ಕು. ದಿಯಾ ಕಾರ್ಯಕ್ರಮ ನಿರೂಪಿಸಿದರು, ಕು.ಶ್ರೀಷ್ಮಾ ವಂದಿಸಿದರು.