ಬಂಟ್ವಾಳ :. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ವತಿಯಿಂದ ಬಂಟ್ವಾಳ ತಾಲೂಕಿನ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲಕಾಡು ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮಂಗಳವಾರ ಜರಗಿತು.

ಶಾಲಾ ಸಹ ಶಿಕ್ಷಕಿಯಾದ ಕವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ ಮಾತನಾಡಿ ದುಶ್ಚಟದಿಂದ ಆರೋಗ್ಯ ಸಮಸ್ಯೆ ಆಗೋದರ ಜೊತೆಗೆ ಮಿತವಾಗಿ ಟಿವಿ, ಮೊಬೈಲ್ ಬಳಕೆ ಮಾಡುವಂತೆ ತಿಳಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ವಿದ್ಯಾರ್ಥಿಗಳಾಗಿ ತಮ್ಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣರವರು ಕಾರ್ಯಕ್ರಮದ ಉದ್ದೇಶದ ಬಗ್ಗೆ ಪ್ರಾಸ್ತಾವಿಕ ನುಡಿಗಳಲ್ಲಿ ಹೇಳಿ ಯೋಜನೆಯ ಕಾರ್ಯಕ್ರಮ ಹಾಗೂ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸವಲತ್ತು ಗಳ ಬಗ್ಗೆ ತಿಳಿಸಿ ಜೀವನದಲ್ಲಿ ಆದರ್ಶ ವ್ಯಕ್ತಿಯಾಗಿ ಬೆಳೆದು ಬರುವಂತೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಆರ್ ಕೆ ಎಸ್ ಕೆ ಕೌನ್ಸಿಲರ್ ತಾಲೂಕು ಆಸ್ಪತ್ರೆ ಬಂಟ್ವಾಳದ ಅಕ್ಷತಾ ಮದ್ಯಪಾನ ಧೂಮಪಾನ ಮತ್ತು ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ, ಸಾಮಾಜಿಕವಾಗಿ ಆರ್ಥಿಕವಾಗಿ ಕೌಟುಂಬಿಕವಾಗಿ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿಸಿದರು.

ಆರೋಗ್ಯ ಮಿತ್ರ ಉಷಾ ಆಯುಷ್ಮಾನ್ ಕಾರ್ಡಿನ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು .

ವಿ ಎಲ್ ಇ ವಸಂತಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆಯನ್ನು ಮಾಡಿಸಿದರು.

ಕಾರ್ಯಕ್ರಮದಲ್ಲಿ ಜನ ಜಾಗೃತಿ ತಾಲೂಕು ಸದಸ್ಯರಾದ ಶ್ರೀನಿವಾಸ್ ಶೆಣೈ,ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ಉಪಸ್ಥಿತರಿದ್ದರು.

ಸಹ ಶಿಕ್ಷಕಿರಾದ ಜಯಶ್ರೀ ಕೆ ಸ್ವಾಗತಿಸಿ, ಸೇವಾ ಪ್ರತಿನಿಧಿ ಪ್ರಪುಲ್ಲ ಧನ್ಯವಾದ ನೀಡಿ. ಮೇಲ್ವಿಚಾರಕಿ ರೂಪ ಜೆ ರೈ ಕಾರ್ಯಕ್ರಮ ನಿರೂಪಿಸಿದರು.