ಬೆಂಗಳೂರು: ಸಿಲಿಕಾನ್‌ ಸಿಟಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇದನ್ನೂ ಓದಿ :  ನವರಾತ್ರಿಗೆ ‘ಗೃಹಲಕ್ಷ್ಮಿ’ಯರಿಗೆ ಗುಡ್‌ ನ್ಯೂಸ್‌; ಹಬ್ಬಕ್ಕೆ ಅಕೌಂಟ್‌ಗೆ ಬರಲಿದೆ ಹಣ

ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಕೊಪ್ಪಳ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.