ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗಿದ್ದು, ಶಿರಾಡಿಘಾಟ್ (Shiradi Ghat) ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಇದನ್ನೂ ಓದಿ :World Otter Day ಮೇ 27 ವಿಶ್ವ ನೀರುನಾಯಿ ದಿನ
ಸಕಲೇಶಪುರ (Sakaleshpura) ತಾಲೂಕಿನ ಮಾರನಹಳ್ಳಿ ಸಮೀಪ ಭೂಕುಸಿತದ ಪರಿಣಾಮ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ ಮಣ್ಣು ತೆರವು ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ : ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಬೋಟ್ ಗಳಲ್ಲಿ ಸಾರ್ವಜನಿಕರ ಸ್ಥಳಾಂತರ – ಇಬ್ಬರು ಸಾವು
ಮಣ್ಣು ಕುಸಿದ ಕೂಡಲೇ ಇಟಾಚಿ ಮೂಲಕ ಮಣ್ಣು ತೆರವು ಕಾರ್ಯಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕುಸಿಯುವ ಆತಂಕ ಎದುರಾಗಿದೆ.