ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್  ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಇದನ್ನೂ ಓದಿ : ಕಬಿನಿ ಡ್ಯಾಂಗೆ ಶಿವಣ್ಣ ದಂಪತಿ ಭೇಟಿ

ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಬೇಕು. ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್‌ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ :  48ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ