ಬಳಿಕ ಮಾತನಾಡಿ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರು ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕಂಠೀರವ ಸ್ಟೇಡಿಯಂ ಮಾದರಿಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗಿದೆ. ಸಿಂಥೆಟಿಕ್ ಟ್ರ್ಯಾಕ್, ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಇದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸುವ ಸಾಮಾರ್ಥ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಡಾ. ಕೆ.ಗೋವಿಂದರಾಜ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪಾವಗಡ ಶಾಸಕರಾದ ಹೆಚ್.ವಿ.ವೆಂಕಟೇಶ್, ಒಲಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ.ಅನಂತರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಭು ಅವರು ಇದ್ದರು.