ಕೆಪಿಸಿಸಿ, ಬಿಬಿಎಂಪಿ ಕೆರೆಗಳ ಅಭಿವೃದ್ಧಿ ಪ್ರಾಧಿಕಾರ, ಬಿಎಂಆರ್‌ಸಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ ಹಾಗೂ ಸ್ಥಳೀಯರ ಸಹಯೋಗದೊಂದಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಟಲ್ ಬಿಹಾರಿ ವಾಜಪೇಯಿ ಆಟದ ಮೈದಾನದಲ್ಲಿ ಆಯೋಜಿಸಿದ್ದ ‘ಪರಿಸರ ಜಾಗೃತಿ ಅಭಿಯಾನ’ 10000 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಚಾಲನೆ ನೀಡಿದರು. ಇದನ್ನೂ ಓದಿ : ಕಾರಾಗೃಹ ಪ್ರಧಾನ ಕಚೇರಿಯ ಅನೆಕ್ಸ್ ಬಿಲ್ಡಿಂಗ್ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ
ಬಳಿಕ ಮಾತನಾಡಿ ವಿಶ್ವದಲ್ಲಿ ಅರಣ್ಯ ನಾಶವಾಗುತ್ತಿರುವ ಪರಿಣಾಮ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ. ಸಣ್ಣ ಜೀವಿಗಳು ನಶಿಸುತ್ತಿವೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿರುವ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಲಿದೆ. ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಲು ನಾವೆಲ್ಲ ಕೈಜೋಡಿಸೋಣ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಉಮಾಪತಿ ಶ್ರೀನಿವಾಸ್‌ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯಾರೆಡ್ಡಿ, ಜಿ.ಎ.ಬಾವಾ ಮುಂತಾದವರು ಉಪಸ್ಥಿತರಿದ್ದರು.