ಉಡುಪಿ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ  ಗೃಹ  ಸಚಿವ  ಡಾ| ಜಿ.ಪರಮೇಶ್ವರ ಅವರು  ಭೇಟಿ‌ ನೀಡಿದರು.  ಬಳಿಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿವಂಗತ ಆಸ್ಕರ್ ಫರ್ನಾಂಡೀಸ್ ಅವರ ಪುತ್ಥಳಿಗೆ ಪುಷ್ಪಾರ್ಪಣೆ ಮೂಲಕ ಸ್ಮರಿಸಿದರು. ಇದನ್ನೂ ಓದಿ : ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ
ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಸದೃಡವಾಗಿ ಕಟ್ಟುವ ಕೆಲಸ ಮಾಡಬೇಕು. ಪಕ್ಷದ ವಿಚಾರದಲ್ಲಿ ನಮ್ಮ ವೈಯಕ್ತಿಕ ಪ್ರತಿಷ್ಟೆಯನ್ನು ಬದಿಗಿಟ್ಟು ಸಂಘಟನೆಯಲ್ಲಿ ತೊಡಗಬೇಕು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ,‌ ಕೆಪಿಸಿಸಿ ಉಪಾಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್, ಎಂ.ಎ.ಗಫೂರ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ.ಸುಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ : ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ