ವಿಟ್ಲ : ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.

ಪತ್ನಿಯ ಸೀಮಂತದ ದಿನದಂದೆ ಸಾವನ್ನಪ್ಪಿದ ಪತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ತಿಳಿದುಬಂದಿದೆ.  ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.

ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಡರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸೂತಕ ಆವರಿಸಿದೆ.