ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ ಎಂದು ಸಿ.ಎಂ.ಸಿದ್ಧರಾಮಯ್ಯ ಹೇಳಿದರು.
ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ “ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ” ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ಬೈರತಿ ಸುರೇಶ್, ಡಾ|| ಎಂ.ಸಿ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.