ಗೃಹಸಚಿವರಾದ ಡಾ|ಜಿ.ಪರಮೇಶ್ವರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾದ 12 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಹಾಗೂ 54 ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಇದನ್ನೂ ಓದಿ : ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಅವರು ಸಿ.ಎಂ.ಭೇಟಿ
ಈ ವೇಳೆ ಪೊಲೀಸ್ ಸಿಬ್ಬಂದಿಗಳು ವಾಸವಿದ್ದ ವಸತಿಗೃಹಗಳಿಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳು ಸೇರಿದಂತೆ ಸಿಬ್ಬಂದಿಗಳ ಸಮಸ್ಯೆಯನ್ನು ಖುದ್ದು ಆಲಿಸಿದರು.
ಬಳಿಕ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ, ಡಾ. ಅರುಣ್ .ಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಉಪಸ್ಥಿತದ್ದರು.