ಹೆಬ್ಬಾಳದಲ್ಲಿ ಇಂದು ಬೆಂಗಳೂರು ಉತ್ತರ ಜಿಲ್ಲಾ ಚುನಾವಣಾ ಕಚೇರಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು. ರಾಜ್ಯದಲ್ಲಿ ಮೊದಲಿಗೆ ಆರಂಭವಾಗುತ್ತಿರುವ ಚುನಾವಣಾ ಕಚೇರಿ ಇದಾಗಿದ್ದು ಮತ್ತೊಮ್ಮೆ ಮೋದಿ ಜೀ ಅವರ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇಂದಿನಿಂದಲೇ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ವಿರಮಿಸದೇ ಶ್ರಮಿಸಬೇಕೆಂಬ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಸದಾನಂದ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಉತ್ತರ ಲೋಕಾಸಭಾ ಕ್ಷೇತ್ರದ ಸಂಚಾಲಕರಾದ ಶ್ರೀ ಸಚ್ಚಿದಾನಂದಮೂರ್ತಿ, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೆರೆ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ನಾರಾಯಣ್, ಮುಖಂಡರಾದ ಶ್ರೀ ಕಟ್ಟಾ ಜಗದೀಶ್ ನಾಯ್ಡು ಅವರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.