ಬೆಂಗಳೂರು ಜಯನಗರದಲ್ಲಿ ಆಯೋಜಿಸಿದ್ದ ಬೃಹತ್ ರೋಡ್ ಶೋ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೆರಳಿ ಬೆಂಗಳೂರು ದಕ್ಷಿಣ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿದರು.

ಮಹತ್ವಪೂರ್ಣ ಜನಕಲ್ಯಾಣ ಯೋಜನೆಗಳ ಮೂಲಕ ಪ್ರತಿ ಮನೆಗಳಲ್ಲಿಯೂ ಒಂದಿಲ್ಲೊಂದು ಫಲಾನುಭವಿಗಳು ಸಿಗುವಂತೆ ಅಭಿವೃದ್ಧಿಯ ಹಾದಿಯಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟು,

ನವ ಭಾರತವನ್ನು ಜಗದ್ವಿಖ್ಯಾತಗೊಳಿಸಿರುವ ಹೆಮ್ಮೆಯ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಮಗದೊಮ್ಮೆ ಪ್ರಧಾನಿ ಮಾಡುವ ಗುರಿ ಕಾರ್ಯಕರ್ತರ ಜಯಘೋಷದೊಂದಿಗೆ ಮೊಳಗಿತು.

ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಶ್ರೀ ಆರ್ ಅಶೋಕ್, ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ,

ಶಾಸಕರುಗಳಾದ ಶ್ರೀ ಸತೀಶ್ ರೆಡ್ಡಿ, ಶ್ರೀ ಎಂ.ಕೃಷ್ಣಪ್ಪ, ಶ್ರೀ ಉದಯ್ ಗರುಡಾಚಾರ್, ಶ್ರೀ ರವಿಸುಬ್ರಹ್ಮಣ್ಯ, ನೂತನ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋಪಿನಾಥ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರು ಸೇರಿದಂತೆ ಪಕ್ಷದ ಮುಖಂಡರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.