ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ ಗ್ರಾಮದಲ್ಲಿ ನಡೆದ ಕರ್ನಾಟಕ ಪಬ್ಲಿಕ್ ಶಾಲೆಯ ನವೀಕರಣಗೊಂಡ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಕೊರಟಗೆರೆ ತಾಲ್ಲೂಕಿನ 19 ಶಾಲೆಗಳಿಗೆ 44 ಸಿದ್ಧಪಡಿಸಿದ ಶೌಚಾಲಯ ಘಟಕಗಳನ್ನು ಶಾಲೆಗಳಿಗೆ ಹಸ್ತಾಂತರಿಸಲಾಯಿತು. ಬಳಿಕ ಕಾರ್ಯಕ್ರಮವನ್ನು ಗೃಹಸಚಿವ ಡಾ| ಜಿ.ಪರಮೇಶ್ವರ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಎಲ್ಲ ಶಾಲೆಗಳಿಗೆ ಕೊಠಡಿಗಳು, ಶೌಚಾಲಯ, ಪೀಠೋಪಕರಣಗಳು ಹಾಗೂ ಸ್ಮಾರ್ಟ್‌ಕ್ಲಾಸ್‌ಗೆ ಬೇಕಾದ ಅಗತ್ಯ ಉಪಕರಣಗಳನ್ನು ಒದಗಿಸಲಾಗುವುದು. ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಲ್ಲಿ ಹಿಂದೆ ಉಳಿಯಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಲೆರಾಂಪುರದ ಶ್ರೀ ಕುಂಚಿಟಿಗ ಒಕ್ಕಲಿಗ ಮಠದ ಡಾ. ಹನುಮಂತನಾಥ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ, ಮುಖಂಡರಾದ ಸೋಮಶೇಖರ್, ಗಣೇಶ್ ರಾಮನ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು‌.